﴿اللَّهُ لَا إِلَهَ إِلَّا هُوَ الْحَيُّ الْقَيُّومُ لَا تَأْخُذُهُ سِنَةٌ وَلَا نَوْمٌ لَهُ مَا فِي السَّمَاوَاتِ وَمَا فِي الْأَرْضِ مَنْ ذَا الَّذِي يَشْفَعُ عِنْدَهُ إِلَّا بِإِذْنِهِ يَعْلَمُ مَا بَيْنَ أَيْدِيهِمْ وَمَا خَلْفَهُمْ وَلَا يُحِيطُونَ بِشَيْءٍ مِنْ عِلْمِهِ إِلَّا بِمَا شَاءَ وَسِعَ كُرْسِيُّهُ السَّمَاوَاتِ وَالْأَرْضَ وَلَا يَئُودُهُ حِفْظُهُمَا وَهُوَ الْعَلِيُّ الْعَظِيمُ﴾ [سورة البقرة: ٢٥٥]
ಆಯತುಲ್ ಕುರ್ಸೀ ಒಂದು ಸಲ ಪಾರಾಯಣ ಮಾಡಬೇಕು.
ಅಲ್ಲಾಹು. ಅವನ ಹೊರತು ಅನ್ಯ ಸತ್ಯ ಆರಾಧ್ಯರಿಲ್ಲ. ಅವನು ನಿರಂತರ ಜೀವಿಸುವವನು. ಸ್ವಯಂ ಅಸ್ತಿತ್ವದಲ್ಲಿರುವವನು ಮತ್ತು ಇತರೆಲ್ಲವನ್ನೂ ಸಂರಕ್ಷಿಸಿ ನಿಯಂತ್ರಿಸುವವನು. ತೂಕಡಿಕೆಯೋ ನಿದ್ದೆಯೋ ಅವನನ್ನು ಹಿಡಿದುಕೊಳ್ಳುವುದಿಲ್ಲ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದ್ದು. ಅವನ ಅಪ್ಪಣೆಯಿಲ್ಲದೆ ಅವನ ಬಳಿ ಶಿಫಾರಸು ಮಾಡುವವರು ಯಾರು? ಅವರಿಗೆ ಈಗಾಗಲೇ ಸಂಭವಿಸಿರುವುದನ್ನು ಮತ್ತು ಮುಂದೆ ಸಂಭವಿಸಲಿರುವುದನ್ನು ಅವನು ಅರಿಯುತ್ತಾನೆ. ಅವನು ಇಚ್ಛಿಸಿದ್ದನ್ನು ಹೊರತು ಅವನ ಜ್ಞಾನದಿಂದ ಏನನ್ನೂ ಸೂಕ್ಷ್ಮವಾಗಿ ಅರಿಯಲು ಅವರಿಗೆ ಸಾಧ್ಯವಿಲ್ಲ. ಅವನ ಕುರ್ಸೀ ಭೂಮ್ಯಾಕಾಶಗಳನ್ನು ಆವರಿಸಿಕೊಂಡಿದೆ. ಅವುಗಳನ್ನು ಸಂರಕ್ಷಿಸುವುದು ಅವನಿಗೆ ಭಾರವಿರುವ ಸಂಗತಿಯೇ ಅಲ್ಲ. ಅವನು ಅತ್ಯುನ್ನತನೂ ಮಹಾನನೂ ಆಗಿದ್ದಾನೆ.